testtest second

test content
  • About Us
  • Contact us
  • Terms and Conditions
  • Privacy policy
Tuesday, June 9, 2026
Retail
Advertisement
Advertise
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
No Result
View All Result
Namu
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
Nammura Suddi
Home Blog

ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಬಹು ನಿರೀಕ್ಷಿತ “ಫಾದರ್” ಚಿತ್ರಕ್ಕೆ ಮಾತಿನ ಜೋಡಣೆ ಮುಕ್ತಾಯ…

by nammurasuddi Online
April 11, 2026
in Blog

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ, ಅಪರೂಪದ ಕಥಾಹಂದರ ಹೊಂದಿರುವ ಆರ್.ಸಿ.ಸ್ಟುಡಿಯೋಸ್ ನಿರ್ಮಾಣದ ಹಾಗೂ ಪ್ರಕಾಶ್ ರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಪ್ರಮುಖಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ “ಫಾದರ್” ಚಿತ್ರದ ಮಾತಿನ ಜೋಡಣೆ ಮುಕ್ತಾಯವಾಗಿದೆ. ಇತ್ತೀಚೆಗೆ ಬಹುಭಾಷ ನಟ ಪ್ರಕಾಶ್ ರಾಜ್ ಅವರು ಶ್ರೀರಂಗಪಟ್ಟಣದಲ್ಲಿರುವ ತಮ್ಮ ಸ್ಟುಡಿಯೋದಲ್ಲೇ “ಫಾದರ್” ಚಿತ್ರದ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ ಅಭಿನಯದ “ಲವ್ ಮಾಕ್ಟೇಲ್ ೩” ಚಿತ್ರ ಭರ್ಜರಿ ಯಶಸ್ಸು ಕಂಡಿದೆ. ಡಾರ್ಲಿಂಗ್ ಕೃಷ್ಣ ಅಭಿನಯದ “ಫಾದರ್” ಚಿತ್ರದ ಪ್ರಚಾರ ಕಾರ್ಯಕ್ಕೂ ಈಗ ಚಾಲನೆ ದೊರಕಿದೆ. ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಈಗಾಗಲೇ ಈ ಚಿತ್ರದ ಫಸ್ಟ್ ಲುಕ್ ಹಾಗೂ ಸುದೀಪ್ ಅವರು ಅನಾವರಣಗೊಳಿಸಿದ ಟೀಸರ್ ಎಲ್ಲರ ಮನ ಗೆದ್ದಿದೆ.

ಆರ್.ಸಿ. ಸ್ಟುಡಿಯೋಸ್ ಮೂಲಕ ಹೊರಬರುತ್ತಿರುವ ಈ “ಫಾದರ್” ಚಿತ್ರವು ನೋಡುಗರನ್ನು ಭಾವುಕ ಪಯಣಕ್ಕೆ ಕರೆದೊಯ್ಯುವ ಹೃದಯ ಸ್ಪರ್ಶಿ ಚಿತ್ರವಾಗಲಿದೆ.

“ಫಾದರ್” ಅಂದರೆ ಒಂದು ಶಕ್ತಿ. ತಮ್ಮ ನಟನೆ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಕಾಶ್ ರಾಜ್ ಅವರೇ ಇಲ್ಲಿ “ಫಾದರ್”. ಇನ್ನು, ಡಾರ್ಲಿಂಗ್ ಕೃಷ್ಣ ಕೂಡ ಪ್ರಮುಖ ಆಕರ್ಷಣೆ. ಇವರಿಬ್ಬರ ಕಾಂಬೋದಲ್ಲಿ ಬರುತ್ತಿರುವ “ಫಾದರ್” ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಅದಕ್ಕೆ ಕಾರಣ, “ಲವ್ ಮಾಕ್ಟೇಲ್” ಜೋಡಿ ಇಲ್ಲೂ ಒಂದಾಗಿದೆ. ಡಾರ್ಲಿಂಗ್ ಕೃಷ್ಣ ಅವರ ಜೊತೆ ಅಮೃತಾ ಅಯ್ಯಂಗಾರ್ ಇದ್ದಾರೆ ಎನ್ನುವುದು ಮತ್ತೊಂದು ವಿಶೇಷ. ಇವರೊಂದಿಗೆ ಅನೇಕ ನುರಿತ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಅಲ್ಲಿಗೆ “ಫಾದರ್” ಸಿನಿಮಾದ ಕುತೂಹಲ ಮತ್ತಷ್ಟು ಹೆಚ್ಚಿದೆ.

YOU MAY ALSO LIKE

ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ

ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!

ಚಂದ್ರು ಅವರ ನಿರ್ಮಾಣದ ಚಿತ್ರಗಳಿಗೆ ಅವರದೆ ಆದ ಅಭಿಮಾನಿ ಬಳಗ ಇದೆ. “ಫಾದರ್” ಕೂಡ ಅವರ ನಿರೀಕ್ಷೆಯನ್ನು ಹೆಚ್ಚಿಸಿದೆ. ತಂದೆ – ಮಗನ ಬಾಂಧವ್ಯದ “ಫಾದರ್” ಚಿತ್ರ ಈ ವರ್ಷದ ಹಿಟ್ ಲಿಸ್ಟ್ ಸಿನಿಮಾಗಳ ಸಾಲಿಗೆ ಸೇರುವ ಎಲ್ಲಾ ಲಕ್ಷಣಗಳೂ ಇವೆ. ಅಭಿಮಾನಿಗಳು ಸಹ ಈ ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.

ಮುಂಬೈನ ಖ್ಯಾತ ಉದ್ಯಮಿ ಆನಂದ್ ಪಂಡಿತ್ ಅರ್ಪಿಸುವ, ಅಲಂಕಾರ್ ಪಾಂಡ್ಯನ್ ಅವರ ಸಹಯೋಗದಲ್ಲಿ ಆರ್.ಸಿ.ಸ್ಟುಡಿಯೋಸ್ ಈ ಸಿನಿಮಾ ನಿರ್ಮಿಸಿದರೆ, ರಾಜ್‍ ಮೋಹನ್‍ ನಿರ್ದೇಶನ ಮಾಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣವಿದೆ. ನಕುಲ್ ಅಭಯಂಕರ್ ಸಂಗೀತ ಸಂಯೋಜನೆ “ಫಾದರ್” ಚಿತ್ರಕ್ಕಿದೆ…

Share199Tweet124

Search

No Result
View All Result

Recent News

ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ

ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ

Nammura Suddi

ನಮ್ಮೂರ ಸುದ್ದಿ ವಿಶ್ವಾಸಾರ್ಹ ಕನ್ನಡ ಡಿಜಿಟಲ್ ನ್ಯೂಸ್ ವೇದಿಕೆಯಾಗಿದ್ದು, ರಾಜ್ಯ, ರಾಷ್ಟ್ರ ಮತ್ತು ಜಗತ್ತಿನ ಪ್ರಮುಖ ಸುದ್ದಿಗಳನ್ನು ನಿಖರವಾಗಿ ತಲುಪಿಸುತ್ತದೆ.
ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ ನಮ್ಮೂರಿನ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇವೆ.
ಸತ್ಯ ಮತ್ತು ನಿಷ್ಪಕ್ಷಪಾತತೆಯೇ ನಮ್ಮ ಗುರುತು.

Recent News22

  • ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ
  • ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!
  • ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ
  • ಮಹಿಳಾ ಮೀಸಲಾತಿ ಸಂಭ್ರಮದ ಕ್ಷಣ: ಮಾಳವಿಕಾ ಅವಿನಾಶ್
  • “ರುದ್ರ ಕಾಲ” ಚಿತ್ರಕ್ಕೆ ದಿಗಂತ್ ನಾಯಕ ‌ ‌‌‌

Quick Links

dfef
  • About Us
  • Contact us
  • Terms and Conditions
  • Privacy policy

© 2026 Nammura Sudhi. All Rights Reserved. Developed by Onecorpus Techworks

No Result
View All Result
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ

© 2026 Nammura Sudhi. All Rights Reserved. Developed by Onecorpus Techworks