ಬೆಂಗಳೂರು: ರಾಷ್ಟ್ರೋತ್ಥಾನ ಪರಿಷತ್ನ ನಿಕಟಪೂರ್ವ ಅಧ್ಯಕ್ಷರು ಹಾಗೂ ರಾಷ್ಟ್ರೋತ್ಥಾನ ಸಾಹಿತ್ಯದ ಗೌರವ ಸಂಪಾದಕರಾಗಿದ್ದ ನಾಡೋಜ ರಾಷ್ಟ್ರೋತ್ಥಾನ ಪರಿಷತ್ನ ನಿಕಟಪೂರ್ವ ಅಧ್ಯಕ್ಷರು ಹಾಗೂ ರಾಷ್ಟ್ರೋತ್ಥಾನ ಸಾಹಿತ್ಯದ ಗೌರವ ಸಂಪಾದಕರಾಗಿದ್ದ ನಾಡೋಜ ಡಾ. ಎಸ್.ಆರ್.ರಾಮಸ್ವಾಮಿಗಳವರು ಇಹಲೋಕದ ಯಾತ್ರೆಯನ್ನು ಮುಗಿಸಿರುತ್ತಾರೆ. ತುಂಬು ಜೀವನ ನಡೆಸಿ, ಅಗಲಿರುವ ಆತ್ಮಕ್ಕೆ ಭಾವಪೂರ್ಣ ಶ್ರದ್ಧಾಂಜಲಿಗಳು. ಅವರ ನಿಧನದ ಸುದ್ದಿ ನೋವುಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸಂತಾಪ ಸೂಚಿಸಿದ್ದಾರೆ.ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಮತ್ತು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.